ರಾಜ್ಯ

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತುಮಕೂರು ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನು ಓದಿ: 6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಭಾದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾದ ಶಂಕರ ಬಿದರಿ ಅವರು ನುಡಿನಮನ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು. 95 ವರ್ಷಗಳ ಸಾರ್ಥಕ ಜೀವನ ನಡೆಸಿದ ಶಾಮನೂರು ಶಿವಶಂಕರಪ್ಪ ಅವರು, ಶಾಸಕರಾಗಿ, ಸಂಸದರಾಗಿ, ಮಂತ್ರಿಗಳಾಗಿ ಈ ನಾಡಿಗೆ ಕೊಡುಗೆ ನೀಡಿದ್ದಾರೆ. ಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯೂ ಅನನ್ಯವಾದ್ದು ಅವರ ನುಡಿ ನಮನ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ನೆರೆ ರಾಜ್ಯದಿಂದಲೂ ಅಭಿಮಾನಿಗಳು, ಸಮಾಜದ ಬಾಂಧವರು ಆಗಮಿಸುತ್ತಿದ್ದಾರೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಅಭಿಮಾನಿಗಳು ಮತ್ತು ಸಮುದಾಯದ ಬಾಂಧವರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ

ಆಂದೋಲನ ಡೆಸ್ಕ್

Recent Posts

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

7 mins ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

27 mins ago

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

4 hours ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

4 hours ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

4 hours ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

4 hours ago