ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರ ಕುರಿತಾದ ನೀಡಿರುವ ವಿವಾದದ ಹೇಳಿಕೆಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡಿ ಬಾಯಿಗೆ ಬಂದಂತೆ ಮಾತನಾಡಿದರೆ ಹುಷಾರ್. ಹಾಗೆ ಮಾತನಾಡದೇ ನಿನ್ನ ಬಾಯಿಗೆ ನೀನೆ ಬೀಗ ಹಾಕೀಕೊಂಡರೆ ಒಳ್ಳೆಯದು, ಇಲ್ಲ ಅಂದರೆ ನಾವು ಬೀಗ ಹಾಕ್ತೇವೆ ಎಂದು ಯತ್ನಾಳ್ ವಿರುದ್ಧ ಗುಡುಗಿದರು.
ಬಸವಣ್ಣನವರು ಹೊಳೆಗೆ ಹಾರಿ ಸತ್ತರು ಎನ್ನುತ್ತೀರಾ. ಇನ್ನೊಂದು ಕಡೆ ವೀರಶೈವ ಮಹಾಸಭಾ ಅಂದರೆ ಭೀಮಣ್ಣ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅಂತೀರಾ. ಮಹಾಸಭಾ ಎಂದರೆ ಏನೆಂದುಕೊಂಡಿದ್ದೀರಿ? ಇಂತಹ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ ಎಂದು ಕಿಡಿಕಾರಿದರು.
ಬಸವಣ್ಣ ಅವರು ಹೊಳೆಗೆ ಹಾರಿದರು ಎನ್ನುವ ನಿಮ್ಮನ್ನೇ ಹೊಳೆಗೆ ಹಾರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…