ರಾಜ್ಯ

ಡಿಸೇಲ್‌ ಬೆಲೆ ಏರಿಕೆ|ಏಪ್ರಿಲ್.‌15 ಅನಿರ್ದಿಷ್ಟಾವಧಿ ಲಾರಿ ಮುಷ್ಕರ: ಅಧ್ಯಕ್ಷ ಷಣ್ಮುಗಪ್ಪ

ಬೆಂಗಳೂರು: ಲಾರಿ ಮಾಲೀಕರ ಸಂಘದ ವತಿಯಿಂದ ಏಪ್ರಿಲ್‌.15 ರಿಂದ ಡಿಸೇಲ್‌ ದರ ಏರಿಕೆಯನ್ನು ಖಂಡಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಮಾಡಲಾಗುವುದು ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಏಳು ತಿಂಗಳಲ್ಲಿ ಡಿಸೇಲ್‌ ಬೆಲೆ 5ರೂ. ಏರಿಕೆಯಾಗಿದೆ. ಈ ಬೆಲೆಯಿಂದ ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡೋದು ಸರಿಯಲ್ಲ ಎಂದರು.

ಡಿಸೇಲ್‌ ದರ, ಫಿಟ್ನೆಸ್‌ ಫೀಸ್‌, ಬಾರ್ಡ್‌ರ್‌ ಚೆಕ್‌ ಪೋಸ್ಟ್‌ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರವನ್ನು ಏಪ್ರಿಲ್‌.14ರ ಮಧ್ಯರಾತ್ರಿಯಿಂದಲೇ ಹೋರಾಟ ಪ್ರಾರಂಭ ಮಾಡಲಿದ್ದೇವೆ. ಅಲ್ಲದೇ ಹೋರಾಟ ಶುರುವಾದ ನಂತರ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಅವುಗಳನ್ನು ಪರೀಕ್ಷಿಸಲು ಚೆಕ್ ಪೋಸ್ಟ್‌ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಇನ್ನೂ ಈ ಮುಷ್ಕರಕ್ಕೆ ಪೆಟ್ರೋಲ್‌ ಮಾಲೀಕರು ಬೆಂಬಲ ನೀಡಿದ್ದಾರೆ. ಹೀಗಾಗಿ ಏರ್‌ಪೋರ್ಟ್‌ ಟ್ಯಾಕ್ಸಿ, ಮರಳು ಲಾರಿ, ಜಲ್ಲಿ ಕಲ್ಲು, ಗೂಡ್ಸ್‌ ವಾಹನಗಳು, ಪೆಟ್ರೋಲ್‌ ಮತ್ತು ಡಿಸೇಲ್‌ ಲಾರಿ ಹಾಗೂ ಅಕ್ಕಿ ಲೋಡ್‌ ಲಾರಿಗಳನ್ನು ಸಹ ಬಂದ್‌ ಮಾಡಲಾಗುತ್ತದೆ. ಒಟ್ಟಾರೆ ಎಲ್ಲಾ ಬಗೆಯ ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಿದೆ. ಆದರೆ ಈ ಹೋರಾಟ ನಮ್ಮ ಬೇಡಿಕೆಗಳು ಈಡೇರುವವರೆಗೂ ನಡೆಯುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

4 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago