Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

sharan prakash patil

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಬಂದರೆ ಕೂಡಲೇ ಪೋಷಕರಿಗೆ ಕರೆ ಮಾಡಿ ಕಳುಹಿಸಿಕೊಡಬೇಕು. ಸಾರಿ ಕೇಸ್‌ಗಳ ಟೆಸ್ಟಿಂಗ್ ಮಾಡಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆಯ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದೇನೆ. ಲ್ಯಾಬ್ ವ್ಯವಸ್ಥೆ, ನಾಲ್ಕು ವಿಭಾಗಗಳಲ್ಲಿ ಟೆಸ್ಟಿಂಗ್ ಮಾಡಲಾಗುತ್ತದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಗ್ಗೆ ಮಾಹಿತಿ ತಿಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕೊರೊನಾ ಪ್ರಕರಣಗಳು ಇದ್ದರೂ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡುವ ಅಗತ್ಯವಿಲ್ಲ. ಜ್ವರ, ಶೀತ, ನೆಗಡಿ ಇದ್ದವರು ಧರಿಸಿದರೆ ಸಾಕು. ನಾವು ಉತ್ತಮವಾಗಿ ಮಾನಿಟರ್ ಮಾಡುತ್ತೇವೆ. ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ಹವಾಮಾನ ಕೂಡ ಬದಲಾವಣೆ. ಇದರಿಂದಲೂ ಜ್ವರ, ನೆಗಡಿ, ಕೆಮ್ಮು ಬರುತ್ತಿದೆ ಎಂದರು.

Tags:
error: Content is protected !!