sharan prakash patil
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಬಂದರೆ ಕೂಡಲೇ ಪೋಷಕರಿಗೆ ಕರೆ ಮಾಡಿ ಕಳುಹಿಸಿಕೊಡಬೇಕು. ಸಾರಿ ಕೇಸ್‌ಗಳ ಟೆಸ್ಟಿಂಗ್ ಮಾಡಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆಯ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದೇನೆ. ಲ್ಯಾಬ್ ವ್ಯವಸ್ಥೆ, ನಾಲ್ಕು ವಿಭಾಗಗಳಲ್ಲಿ ಟೆಸ್ಟಿಂಗ್ ಮಾಡಲಾಗುತ್ತದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಗ್ಗೆ ಮಾಹಿತಿ ತಿಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕೊರೊನಾ ಪ್ರಕರಣಗಳು ಇದ್ದರೂ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡುವ ಅಗತ್ಯವಿಲ್ಲ. ಜ್ವರ, ಶೀತ, ನೆಗಡಿ ಇದ್ದವರು ಧರಿಸಿದರೆ ಸಾಕು. ನಾವು ಉತ್ತಮವಾಗಿ ಮಾನಿಟರ್ ಮಾಡುತ್ತೇವೆ. ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ಹವಾಮಾನ ಕೂಡ ಬದಲಾವಣೆ. ಇದರಿಂದಲೂ ಜ್ವರ, ನೆಗಡಿ, ಕೆಮ್ಮು ಬರುತ್ತಿದೆ ಎಂದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…