ಬೆಂಗಳೂರು: ಈ ಹಿಂದಿನ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಪಾಪವನ್ನು ತೊಳೆದುಕೊಳ್ಳಲು ಈಗ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೋಮವಾರ (ಆ.೩) ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ಭೋವಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಆಗ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಯಾವುದೇ ತನಿಖೆ ನಡೆಸುವ ಬಗ್ಗೆ ಮಾತನಾಡಲಿಲ್ಲ. ಈಗ ಯಾವ ಮುಖ ಹೊತ್ತು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ಅವರು ತಮ್ಮ ಅವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಈ ವರೆಗೆ ತನಿಖೆಗೆ ಕೊಟ್ಟಿಲ್ಲ. ಆದರೆ ನಾವು ವಾಲ್ಮೀಕಿ ಹಗರಣವನ್ನು ತನಿಖೆಗೆ ನೀಡಿದ್ದೇವೆ. ಆದರೆ ಈಗ ಬಿಜೆಪಿ ಅವರು ತಾವು ಸಾಚಾಗಳಂತೆ ಬಿಂಬಿಸಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಬಣ್ಣ ಕೆಲವೇ ದಿನಗಳಲ್ಲಿ ಬಯಲಾಗಲಿದೆ ಎಂದು ಟಾಂಗ್ ಕೊಟ್ಟರು.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…