ಹಾವೇರಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅಬ್ಬರದ ಪ್ರಚಾರ ನಡೆಸಿದರು.
ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಮಣ್ಣೂರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಭರತ್ ಬೊಮ್ಮಾಯಿ ಅವರು, ಬಸವರಾಜ ಬೊಮ್ಮಾಯಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಣೆ ನೀಡಿದರು.
ಬಳಿಕ ಮಧ್ಯಾಹ್ನದ ವೇಳೆಗೆ ತೆಗ್ಗಿಹಳ್ಳಿ ಗ್ರಾಮದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು.
ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೊಟ್ಟಿರೋದು ತಾತ್ಕಾಲಿಕ ಗ್ಯಾರಂಟಿ. ನಾವು ಪರ್ಮನೆಂಟ್ ಗ್ಯಾರಂಟಿ ನೀಡಿದ್ದೇವೆ. ನಮ್ಮ ಕ್ಷೇತ್ರದ 5000ಕ್ಕೂ ಅಧಿಕ ಹೆಣ್ಣುಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…