ರಾಜ್ಯ

ಶಿವಮೊಗ್ಗ: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ.

ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌

ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ʼಸಯ್ಯದ್‌ ರಾಝಿಕ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ. ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನವಾಗಲಿದೆʼ

– ಮಿಥುನ್‌ ಕುಮಾರ್ ಜಿ.ಕೆ,ಎಸ್ಪಿ

andolanait

Recent Posts

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

2 mins ago

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

14 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

11 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

11 hours ago