Mysore
28
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಶಿವಮೊಗ್ಗ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಮುಖಂಡ ಭಾನುಪ್ರಕಾಶ್‌ ನಿಧನ

ಶಿವಮೊಗ್ಗ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಬಿಜೆಪಿ ಹಿರಿಯ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ಅವರು ಕುಸಿತು ಬಿದ್ದು ಮೃತಪಟ್ಟಿದ್ದಾರೆ.

ಇಂದು ಬೆಳಿಗ್ಗೆ ಶಿವಮೊಗ್ಗದ ಗೋಪಿವೃತ್ತದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, ಪ್ರತಿಭಟನೆ ವೇಳೆ ಏಕಾಏಕಿ ಕುಸಿದು ಬಿದ್ದರು. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಸರಳ, ಸಜ್ಜನ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಇವರು, ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿವಾಗಿದ್ದರು. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಬಿಜೆಪಿ ಸಂಘಟನೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

Tags:
error: Content is protected !!