ರಾಜ್ಯ

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು ನಾಮಕರಣ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕೆಂದರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಘೋಷಿಸುವುದಾಗಿ ಅವರು ತಿಳಿಸಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಭಾಷಣಕ್ಕೂ ಮೊದಲು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರಿಡಬೇಕು ಎಂದು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಮನವಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ, ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು ನಾಮಕರಣಕ್ಕೆ ಸಮ್ಮತಿಸಿದರು.

ಅಲ್ಲಮ ಪ್ರಭು ಹೆಸರು ನಾಮಕರಣ ಸಂಬಂಧ ಸಿಎಂ ಟ್ವೀಟ್‌:

ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು.

ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯಲ್ಲಿ ನಿಂತು ಈ ಘೋಷಣೆಯನ್ನು ಮಾಡಲು ನನಗೆ ಸಂತಸವಾಗುತ್ತಿದೆ. ಇದು ಅಲ್ಲಮಪ್ರಭು ಅವರ ಜೀವನ ಮತ್ತು ಆದರ್ಶಗಳಿಗೆ ನಾವು ನೀಡುವ ಗೌರವ ಎಂದು ಭಾವಿಸಿದ್ದೇನೆ.

andolanait

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

3 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

3 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

4 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago