Mysore
26
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕ್‌ ಪರ ಘೋಷಣೆ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಕೆಲ ಕಿಡಿಗೇಡಿಗಳು ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಎಸ್‌ಪಿ ಮಿಥುನ್‌ ಕುಮಾರ್‌ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈ ಸಂಬಂಧ ಭದ್ರಾವತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಪಾಕ್‌ ಪರ ಘೋಷಣೆ ಕೂಗಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

Tags:
error: Content is protected !!