ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ ಬಗ್ಗೆ ಕೆಲ ಸಚಿವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರು ಸಿಎಂ ಆಗಿರುವ ಅವಶ್ಯಕತೆ ಇದೆ. ಆದರೆ ನಾನು ಸಿಎಂ ವಿಚಾರದಲ್ಲಿ ಭವಿಷ್ಯ ನುಡಿಯುವಂತಹನು ಅಲ್ಲ. ಅಲ್ಲದೇ ಮುಖ್ಯಮಂತ್ರಿ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಅಥವಾ ಬಿಡಬೇಕು ಎಂಬುದನ್ನು ಸಿಎಲ್‌ಪಿ ಮತ್ತು ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದರು.
ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ
ರಾಜ್ಯಾದಾದ್ಯಂತ ಕಳೆದ ವರ್ಷ ಬರಗಾಲವಿದ್ದರಿಂದ ಇಳುವರಿ ಹಾಗೂ ಕಬ್ಬು ನುರಿಸುವಿಕೆ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಈ ವರ್ಷ ಕಬ್ಬು ನುರಿಸುವಿಕೆಯ ಪ್ರಮಾಣ ಕಡಿಮೆ ಇರಲಿದೆ. ಆದರೆ ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆಯಿದ್ದು, ಮುಂದಿನ ವರ್ಷ ನಾವು ಕಬ್ಬು ನುರಿಸುವ ಪ್ರಮಾಣದಲ್ಲಿ ಗುರಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೆಲ ಸಕ್ಕರೆ ಕಾರ್ಖಾನೆಗಳು ಶೇ.80 ರಷ್ಟು ಕಬ್ಬಿನ್ ಬಿಲ್ ಪಾವತಿಸಿದ್ದರೆ, ಇನ್ನು ಕೆಲವು ಕಾರ್ಖಾನೆಗಳು ಶೇ.75 ರವರೆಗೆ ಪಾವತಿಸಿವೆ. ಅಲ್ಲದೇ ಒಂದು ಭಾಗ ಮಾತ್ರ ಶೇ.55 ರಿಂದ ಶೇ.60 ರಷ್ಟು ಪಾವತಿಸಿವೆ. ಹೀಗಾಗಿ ರೈತರ ಎಲ್ಲ ಬಾಕಿ ಬಿಲ್‌ಗಳು ಶೀಘ್ರವೇ ಪಾವತಿಯಾಗುತ್ತವೆ ಎಂದು ಹೇಳಿದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…