ಬೆಂಗಳೂರು: ಬೆಂಬಲ ಬೆಲೆ ಶೇಂಗಾ ಖರೀದಿಯ ನೋಂದಣಿ ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.10) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರೀದಿ ಅವಧಿ
ವಿಸ್ತರಣೆ ಬೇಡಿಕೆ ಬಂದ ಹಿನ್ನಲೆಯಲ್ಲಿ ಶೇಂಗಾ ನೋಂದಣಿ ಅವಧಿಯನ್ನು ಜನವರಿ.22 ರವರಗೆ ವಿಸ್ತರಣೆ ಮಾಡಲಾಗುವುದು. ಅಲ್ಲದೇ ಶೇಂಗಾ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 6783 ರೂ.ಗಳನ್ನು ನಿಗಧಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಈ ವಿಸ್ತರಣೆ ಅನ್ವಯ ಧಾರವಾಡ, ಹಾವೇರಿ, ಬಳ್ಳಾರಿ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು,
ಕೊಪ್ಪಳ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದಿದ್ದಾರೆ.