ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಕ್ಯಾನ್ಸರ್ ಮುಕ್ತವಾಗಿದ್ದಾರೆ. ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ತಮ್ಮ ವೈದ್ಯಕೀಯ ವರದಿ ಹಾಗೂ ಅಂತಿಮವಾಗಿ ಕ್ಯಾನ್ಸರ್‌ನಿಂದ ಮುಕ್ತವಾಗಿರುವುದ ಬಗ್ಗೆ ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಈ ಸುದ್ದಿಯನ್ನು ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಅಮೆರಿಕಾದಿಂದಲೇ ವಿಡಿಯೋ ಸಂದೇಶದ ಮೂಲಕ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿಸಿದ ಶಿವರಾಜ್‌ಕುಮಾರ್, ಈವರೆಗೂ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ. ಒಂದು ತಿಂಗಳಿನ ವಿಶ್ರಾಂತಿ ಬಳಿಕ ತಮ್ಮ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದಿದ್ದಾರೆ.
ಮೊದಲಿಗಿಂತಲೂ ಡಬಲ್ ಪವರ್‌ನಲ್ಲಿ ನಿಮ್ಮ ಮುಂದೆ ಬರುತ್ತೇನೆ ಎಂದಿರುವ ಶಿವಣ್ಣ, ತಮ್ಮ ನೆರವಿಗಿದ್ದ ಅಭಿಮಾನಿಗಳು, ಸ್ನೇಹಿತರು, ಸಂಬಂಧಿಕರಿಗೆ ಧನ್ಯವಾದ ಹೇಳಿದ್ದಾರೆ.