ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್, ದೊಡ್ಡ ಮತ್ತು ಸಣ್ಣ ಅಂಗಡಿಗಳ ಬೋರ್ಡ್‌ಗಳನ್ನು ಪುಡಿಗಟ್ಟಿ ಆಕ್ರೋಶಯುತವಾಗಿ ಹೋರಾಟವನ್ನು ಮಾಡಿದರು.
ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಮಾಲ್ ಆಫ್ ಏಷ್ಯಾ ಸೇರಿದಂತೆ ವಿವಿಧೆಡೆ ದೊಡ್ಡ ಮಟ್ಟದಲ್ಲಿ ಜಮಾಯಿಸಿ ಇಂಗ್ಲಿಷ್ ಬೋರ್ಡ್ ಹಾಗೂ ಜಾಹೀರಾತು ಬೋರ್ಡ್‌ಗಳನ್ನು ಹರಿದು ಹಾಕಿದರು. ಇನ್ನು ಮಾಲ್ ಆಫ್ ಏಷ್ಯಾ ಮುಂದೆ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತು. ಮಹಿಳಾ ಹೋರಾಟಗಾರ್ತಿಯರು ಮಾಲ್ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆಯಲು ಹರಸಾಹಸಪಟ್ಟರು. ಕೆಲಕಾಲ ಉಂಟಾದ ತಳ್ಳಾಟದ ಬಳಿಕ ಹೋರಾಟಗಾರರನ್ನು ವಶಕ್ಕೆ ಪಡೆದರು.
ಇನ್ನು ಈ ರೀತಿಯ ಹೋರಾಟಗಳು ನಡೆಯುತ್ತಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಿಂದುಗಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಹೋರಾಟಗಾರರು ಶಾಂತಿಯುತ ಹೋರಾಟವನ್ನು ಮಾತ್ರ ಮಾಡಬೇಕು, ಕನ್ನಡ ಫಲಕಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂಬ ಬಿಲ್ ಅನ್ನು ಈಗಾಗಲೇ ಅಧಿವೇಶನದಲ್ಲಿ ಪಾಸ್ ಮಾಡಲಾಗಿದೆ, ನಮ್ಮ ಇಲಾಖೆ ಸಹ ಕನ್ನಡಪರ ಸಂಘಟನೆಗಳ ಹಾಗೆ ಕೆಲಸ ಮಾಡಲಿದೆ ಎಂದು ಹೇಳಿಕೆಯನ್ನು ನೀಡಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…