ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ವೈದ್ಯರ ಜೊತೆ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವರು ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ವೈದ್ಯರಿಗೆ ಸೂಚಿಸಿದರು.
ಬಳಿಕ ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರು ಧೈರ್ಯ ಹೇಳಿ, ಪ್ರೊ.ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ನಮಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.





