ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮೊದಲು ತಜ್ಞರೊಂದಿಗೆ ಚರ್ಚಿಸಿದ ಬಳಿಕವೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಕಾನೂನಿನಡಿ ಎಲ್ಲರೂ ಒಂದೇ. ಯಾರೇ ಆದರೂ ಕಾನೂನು ಎದುರಿಸಬೇಕು. ಹಾಗಾಗಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ಕಳೆದ 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣ ಲೋಕಾಯುಕ್ತದಲ್ಲಿದ್ದವು. ತನ್ನನ್ನು ತಾನು ರಕ್ಷಿಸಿಕೊಳ್ಳಲು ಲೋಕಾಯುಕ್ತವನ್ನೇ ದುರ್ಬಲ ಮಾಡಿದ್ದರು. ಎಸಿಬಿಗೆ ವರ್ಗಾಯಿಸಿ ಪ್ರಕರಣ ಮುಚ್ಚಿ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಒಂದು ವರ್ಷದಲ್ಲೇ ಸಿಎಂ ಸಿದ್ದರಾಮಯ್ಯರ ಮೇಲೆ ಎರಡು ಆರೋಪಗಳಿವೆ. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿಯ ಭ್ರಷ್ಟಾಚಾರದ ಆರೋಪವಿದೆ.
ಮುಡಾ ಪ್ರಕರಣದಲ್ಲಿ ದಲಿತರ ಜಮೀನನ್ನು ತೆಗೆದುಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸಿಎಂ ಪತ್ನಿ ನಿವೇಶನ ಪಡೆದಿದ್ದಾರೆ. ಎಲ್ಲಾ ಕಾಲದಲ್ಲೂ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದ ಸಿದ್ದರಾಮಯ್ಯ ಪ್ರಕರಣವನ್ನು ಮುಚ್ಚಿಹಾಕಲು ದೇಸಾಯಿ ಸಮಿತಿ ರಚಿಸಿದ್ದಾರೆ ಎಂದು ದೂರಿದರು.
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…