ರಾಜ್ಯ

ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ ಕೌರವರನ್ನು ಶಕುನಿ ಮುಗಿಸಿದ ಹಾಗೇ ಸಿಎಂ ಸಿದ್ದರಾಮಯ್ಯರನ್ನು ಮುಗಿಸಲು ಸಚಿವ ಭೈರತಿ ಸುರೇಶ್‌ ಪಣತೊಟ್ಟಿದ್ದಾರೆ. ಭೈರತಿ ಸುರೇಶ್‌ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಪ್ಪು ಮಾಡಿದ್ದಾರೆ. ಆ ಭಯದಿಂದ ನನ್ನ ಮೇಲೆ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್‌ ಸಾವಿಗೆ ಸುರೇಶ್‌ ಅವರೇ ಕಾರಣ ಅಂತ ಜನರು ಮಾತನಾಡುತ್ತಿದ್ದಾರೆ. ನಾನು ಆ ಮಾತನ್ನು ಹೇಳಲಾ? ಮಾತಾಡುವ ಮುಂಚೆ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು. ಇವರೇ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಕಳಂಕ ತಂದಿದ್ದಾರೆ. ಹೀಗಾಗಿರುವ ಭೈರತಿ ಸುರೇಶ್ ನನ್ನ ಬಗ್ಗೆ ಮಾತನಾಡಿ ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

50 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

6 hours ago