ರಾಜ್ಯ

ಕಾಂಗ್ರೆಸ್‌ ರಕ್ತವೆಲ್ಲಾ ದೇಶ ವಿರೋಧಿ ರಕ್ತ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್‌ ನಿಲ್ಲಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆಯನ್ನು ಕಾಂಗ್ರೆಸ್‌ ನಾಯಕರು ಟೀಕಿಸುತ್ತಿರುವ ಬಗ್ಗೆ ಕಿಡಿಕಾರಿದರು.

ಕಾಂಗ್ರೆಸ್‌ ರಕ್ತವೆಲ್ಲಾ ಬರೀ ದೇಶ ವಿರೋಧಿ ರಕ್ತ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಕಾಂಗ್ರೆಸ್‌ನವರು ಜೋಕ್‌ ಮಾಡುತ್ತಿದ್ದಾರೆ. ಕಾಂಗ್ರೆಸ್‌ ದೇಶದ ಜೊತೆ ನಿಂತು, ಸೈನಿಕರಿಗೆ ಬೆಂಬಲ ಕೊಡಬೇಕಿತ್ತು. ಇದನ್ನು ಮಾಡಲು ಆಗದಿದ್ದರೆ ಬಾಯಿ ಮುಚ್ಚಿಕೊಂಡು ಇರಬೇಕಿತ್ತು ಎಂದು ಕಿಡಿಕಾರಿದರು.

ಇನ್ನು ಪಾಕಿಸ್ತಾನ ಬಹಿರಂಗವಾಗಿಯೇ ಉಗ್ರರ ಕುಟುಂಬಗಳಿಗೆ ಪರಿಹಾರ ಕೊಟ್ಟಿದೆ. ಇದನ್ನು ನೋಡಿಯಾದರೂ ಕಾಂಗ್ರೆಸ್‌ ಸುಮ್ಮನಿರಬೇಕಿತ್ತು. ಕಾಂಗ್ರೆಸ್‌ ನಾಯಕ ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ಮಾತನಾಡುತ್ತಾರೆ. ಕೇಂದ್ರ ಸರ್ಕಾರವನ್ನು ತೆಗೆಯುವುದು ಹೇಗೆ ಎಂದು ಚರ್ಚೆ ನಡೆಸುತ್ತಾರೆ. ಕಾಂಗ್ರೆಸ್‌ ಮಾನಸಿಕತೆ ದೇಶದ ಜನರಿಗೆ ಗೊತ್ತಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

40 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

48 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

49 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

2 hours ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago