ರಾಜ್ಯ

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ದ್ವೇಷ ಭಾಷಣ ನಿಯಂತ್ರಣಕ್ಕೆ ಮಸೂದೆ ತಂದಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ ಮಸೂದೆಯನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಮಸೂದೆಯಲ್ಲಿ ಅನೇಕ ಲೋಪಗಳಿರುವುದು ಗಮನಕ್ಕೆ ಬಂದಿದೆ. ಭಿನ್ನಾಭಿಪ್ರಾಯ ಹತ್ತಿಕ್ಕಲು ಸರ್ಕಾರ ಇದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಸಂವಿಧಾನದ 19ನೇ ವಿಧಿಯ ಅಡಿಯ ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ತಿಳಿಸಿದ್ದಾರೆ.

ಆಡಳಿತ, ಸಾಮಾಜಿಜ ನ್ಯಾಯದ ಬಗ್ಗೆ ಧ್ವನಿ ಎತ್ತುವ ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಪರಿಶಿಷ್ಟ ಜಾತಿ ಪಂಗಡ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳ ಚಟುವಟಿಕೆಗಳನ್ನು ಹತ್ತಿಕ್ಕುವ ಸಾಧ್ಯತೆ ಇದೆ. ಹೀಗಾಗಿ ಮಸೂದೆಯನ್ನು ರಾಷ್ಟ್ರಪತಿ ಪರಿಶೀಲನೆಗೆ ಕಳುಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago