ಬೆಂಗಳೂರು: ವಿಶ್ವದ ನಾಯಕರು ಕೋರಿಕೆ ಇಟ್ಟಾಗ ನಾವು ಅದನ್ನು ಪಾಲಿಸಬೇಕಾಗುತ್ತದೆ ಎಂದು ಕದನ ವಿರಾಮದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಶ್ವದ ಜೊತೆ ಹೋಗುತ್ತಿದ್ದೇವೆ, ವಿಶ್ವದ ಮಾತು ಕೇಳಿದ್ದೇವೆ. ಆದರೆ ಪಾಕಿಸ್ತಾನ ಕೇಳಿಲ್ಲ ಎಂದರು.
ಪಾಕಿಸ್ತಾನದ ನಡೆಯನ್ನು ಇಡೀ ವಿಶ್ವವೇ ನೋಡಿದೆ. ಈಗ ವಿಶ್ವವೇ ಯೋಚಿಸಬೇಕು. ನಾವು ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ವಿ. ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ನಮ್ಮ ಸೈನಿಕರು ಸರ್ವನಾಶ ಮಾಡಿದ್ದಾರೆ. ನಮ್ಮ ಪ್ರತೀಕಾರವನ್ನು ನಾವು ಗಡಿಯಲ್ಲಿ ತೋರಿಸುತ್ತಲೇ ಬಂದಿದ್ದೇವೆ ಎಂದು ಹೇಳಿದರು.
ನಮ್ಮ ದಾಳಿಗೆ ಹೆದರಿ ಪಾಕಿಸ್ತಾನವು ಅಮೇರಿಕಾ ಹಾಗೂ ಬೇರೆ ಬೇರೆ ದೇಶಗಳ ಕಾಲು ಹಿಡಿದುಕೊಂಡು, ಈ ಯುದ್ಧ ನಿಲ್ಲಿಸಬೇಕು. ಯುದ್ಧ ಮುಂದುವರಿಸುವ ಶಕ್ತಿ ನಮಗಿಲ್ಲ ಎಂದು ಕೇಳಿಕೊಂಡಿತ್ತು. ಅಮೇರಿಕಾ ಮಧ್ಯಸ್ಥಿಕೆ ಮೂಲಕ ಕದನ ವಿರಾಮ ನಂತರವು ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ನಾವು ದೇಶಕ್ಕಾಗಿ ನಡಿಗೆ ಮಾಡಿದ್ದೇವೆ. ನಮ್ಮ ಸೈನಿಕ ಪರ ಇಡೀ ದೇಶವೇ ನಿಂತಿದೆ. ತಿನ್ನೋಕೆ, ಕುಡಿಯೋಕೆ ಇಲ್ಲದ ದೇಶ ಪಾಕಿಸ್ತಾನ ನಿರಂತರ ತೊಂದರೆ ಕೊಡುತ್ತಿದೆ ಇದು ನಿಲ್ಲಬೇಕು ಎಂದು ಹೇಳಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…