ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ.
ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಿಖಿಲ್‌ಗೆ ಆಘಾತ: ಆರಂಭಿಕ ಮುನ್ನಡೆ ಸಾಧಿಸಿದ್ದ ನಿಖಿಲ್ ಆರು-ಏಳು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.
ಸಿ.ಪಿ ಯೋಗೇಶ್ವರ್ ಭಾರಿ ಅಂತರದ ಮುನ್ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಹಾಗೂ ಯೋಗೇಶ್ವರ್ ಅವರಿಗೆ ಜಯಗೋಷ ಕೂಗಿ ಸಂಭ್ರಮಿಸುತ್ತಿದ್ದಾರೆ.
ಶಿಗ್ಗಾವಿಯಲ್ಲಿಯೂ ಕಾಂಗ್ರೆಸ್ ಭಾರಿ ಮುನ್ನಡೆಯಲ್ಲಿದ್ದು, ಬಿಜೆಪಿಯ ಭರತ್ ಬೊಮ್ಮಾಯಿ 55,285 ಹಾಗೂ ಕಾಂಗ್ರೆಸ್‌ನ ಯಾಸೀರ್ ಅಹಮದ್ ಖಾನ್ ಪಠಾಣ ಅವರು 68,078 ಮತ ಪಡೆದು 12,793 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಇನ್ನೂ ಸಂಡೂರಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಒಟ್ಟು 19 ಸುತ್ತಿನ ಮತ ಎಣಿಕೆಯಲ್ಲಿ ಈವರೆಗೆ 10ಸುತ್ತುಗಳು ಮುಕ್ತಾಯಗೊಂಡಿವೆ. ಹತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 3,488ಮತಗಳಿಂದ ಮುಂದಿದ್ದಾರೆ.