Categories: ರಾಜ್ಯ

ಚನ್ನಪಟ್ಟಣದಲ್ಲಿ ನಿಖಿಲ್‌ಗೆ ಶಾಕ್: ರಾಜ್ಯದ ಮೂರು ಕಡೆ ʻಕೈʼ ಮೇಲುಗೈ

ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ.

ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಿಖಿಲ್‌ಗೆ ಆಘಾತ: ಆರಂಭಿಕ ಮುನ್ನಡೆ ಸಾಧಿಸಿದ್ದ ನಿಖಿಲ್‌ ಆರು-ಏಳು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.

ಸಿ.ಪಿ ಯೋಗೇಶ್ವರ್‌ ಭಾರಿ ಅಂತರದ ಮುನ್ನಡೆಯಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಡಿ.ಕೆ ಶಿವಕುಮಾರ್‌ ಹಾಗೂ ಯೋಗೇಶ್ವರ್‌ ಅವರಿಗೆ ಜಯಗೋಷ ಕೂಗಿ ಸಂಭ್ರಮಿಸುತ್ತಿದ್ದಾರೆ.

ಶಿಗ್ಗಾವಿಯಲ್ಲಿಯೂ ಕಾಂಗ್ರೆಸ್‌ ಭಾರಿ ಮುನ್ನಡೆಯಲ್ಲಿದ್ದು, ಬಿಜೆಪಿಯ ಭರತ್‌ ಬೊಮ್ಮಾಯಿ 55,285 ಹಾಗೂ ಕಾಂಗ್ರೆಸ್‌ನ ಯಾಸೀರ್‌ ಅಹಮದ್‌ ಖಾನ್‌ ಪಠಾಣ ಅವರು 68,078 ಮತ ಪಡೆದು 12,793 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

ಇನ್ನೂ ಸಂಡೂರಿನಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಒಟ್ಟು 19 ಸುತ್ತಿನ ಮತ ಎಣಿಕೆಯಲ್ಲಿ ಈವರೆಗೆ 10ಸುತ್ತುಗಳು ಮುಕ್ತಾಯಗೊಂಡಿವೆ. ಹತ್ತನೇ ಸುತ್ತಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ 3,488ಮತಗಳಿಂದ ಮುಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

17 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

18 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

18 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

19 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

19 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

22 hours ago