ಬೆಂಗಳೂರು: ಬಸ್, ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಎದುರಾಗಿದೆ.
ಶೀಘ್ರದಲ್ಲೇ ಆಟೋ ಮೀಟರ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್.12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಆಟೋ ಮೀಟರ್ ದರ ಹೆಚ್ಚಳದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ದರವನ್ನು ಎಷ್ಟು ಹೆಚ್ಚಳ ಮಾಡಬೇಕು ಎಂಬ ಚರ್ಚೆ ನಡೆಯಲಿದೆ.
ಈ ಮೂಲಕ ಬೆಂಗಳೂರು ಜನತೆಗೆ ಮಾರ್ಚ್ ಎರಡನೇ ವಾರದಲ್ಲಿ ಆಟೋ ಮೀಟರ್ ದರ ಏರಿಕೆಯಾಗುವ ಎಲ್ಲಾ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.





