gt devegowda
ಬೆಂಗಳೂರು : ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ.
ಜಿ.ಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಕೈದಿಗಳಿಗೆ ರಾಜಾತಿಥ್ಯ : ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆತಂಡ
ಜಿ.ಟಿ ದೇವೇಗೌಡರು ಕೋರ್ ಕಮಿಟಿ ಅಧ್ಯಕ್ಷ ಆಗಿದ್ದರೂ ಯಾವುದೇ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೇ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಮಾತನಾಡುತ್ತಿದ್ದರು. ಅಂತಿಮವಾಗಿ ಜಿ.ಟಿ ದೇವೇಗೌಡರನ್ನು ಬಿಟ್ಟು ಕೃಷ್ಣಾರೆಡ್ಡಿಗೆ ಜೆಡಿಎಸ್ ವರಿಷ್ಠರು ಸ್ಥಾನ ನೀಡಿದ್ದಾರೆ. ಕೋರ್ ಕಮಿಟಿ ಜೊತೆ ಜೆಡಿಎಸ್ ರಾಜಕೀಯ ವ್ಯವಹಾರಗಳ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಪಾಲನ ಸಮಿತಿಗಳಿಗೂ ಅಧ್ಯಕ್ಷರು, ಸದಸ್ಯರನ್ನ ನೇಮಕ ಮಾಡಲಾಗಿದೆ. ರಾಜಕೀಯ ವ್ಯವಹಾರ ಸಮಿತಿಗೆ ಕುಮಾರಸ್ವಾಮಿ ಅವರನ್ನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿಗೆ ವೈ.ಎಸ್.ವಿ. ದತ್ತಾ, ಶಿಸ್ತುಪಾಲನ ಸಮಿತಿಗೆ ಮಾಜಿ ಸಚಿವ ನಾಗರಾಜಯ್ಯ ಅವರನ್ನ ನೇಮಕ ಮಾಡಲಾಗಿದೆ20 ಸದಸ್ಯರು ಒಳಗೊಂಡ ಕೋರ್ ಕಮಿಟಿ, 16 ಸದಸ್ಯರು ಒಳಗೊಂಡ ಪ್ರಚಾರ ಸಮಿತಿ ರಚನೆ ಮಾಡಿದ್ದು, ಹಾಲಿ,ಮಾಜಿ ಶಾಸಕರು,ಸಚಿವರು, ಪಕ್ಷದ ಹಿರಿಯ ನಾಯಕರಿಗೆ ಕಮಿಟಿಗಳಲ್ಲಿ ಸ್ಥಾನ ನೀಡಲಾಗಿದೆ.
ಹೆಚ್‌ಡಿ ರೇವಣ್ಣಗೆ ಕೋರ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ. ಪ್ರಚಾರ ಸಮಿತಿಯಲ್ಲಿ ಸೂರಜ್ ರೇವಣ್ಣಗೆ ಸ್ಥಾನ ಕೊಟ್ಟರೆ ಜಿ.ಟಿ ದೇವೇಗೌಡ ಪುತ್ರ ಹರೀಶ್ ಗೌಡಗೆ ಪ್ರಚಾರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…