ಬೆಂಗಳೂರು: ತಡರಾತ್ರಿ ಕಿಡಿಗೇಡಿಗಳು ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.
ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜಪೇಟೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಒಟ್ಟು 8 ಹಸುಗಳನ್ನು ಸಾಕಿರುವ ಕರ್ಣ ಪ್ರತಿ ದಿನ ಅವುಗಳನ್ನು ಆರೈಕೆ ಮಾಡುತ್ತಾರೆ. ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗುತ್ತದೆ. ಹೀಗೆ ನಿನ್ನೆ ಮಲಗಿದ್ದ ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದಿದ್ದಾರೆ.
ಮಾಹಿತಿ ತಿಳಿದು ಇಂದು ಬೆಳಿಗ್ಗೆ ಕಾಟನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಘಟನಾ ಸ್ಥಳಕ್ಕೆ ಸಂಸದ ಪಿ.ಸಿ.ಮೋಹನ್ ಕೂಡ ಭೇಟಿ ನೀಡಿ ಕರ್ಣ ಅವರ ಕುಟುಂಬಕ್ಕೆ ಸಮಾಧಾನ ಹೇಳಿದ್ದಾರೆ.
ಇನ್ನು ಮೂಕ ಪ್ರಾಣಿಗಳ ಕೆಚ್ಚಲು ಕೊಯ್ದ ಘಟನೆ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…