ರಾಜ್ಯ

ಸುಪ್ರೀಂ ನ್ಯಾಯಮೂರ್ತಿ ಮೇಲೆ ಶೂ ಎಸೆತ ಪ್ರಕರಣ: ಸಿಎಂ ಸಿದ್ದರಾಮಯ್ಯ ಖಂಡನೆ

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಎಸ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಎಸ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂಕೋರ್ಟ್‌ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ.

ಇದನ್ನೂ ಓದಿ:-ಸುಪ್ರೀಂ ನ್ಯಾಯಮೂರ್ತಿ ಮೇಲೆ ಶೂ ಎಸೆತ ಪ್ರಕರಣ: ಸಿಎಂ ಸಿದ್ದರಾಮಯ್ಯ ಖಂಡನೆ

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

8 mins ago

ಎಚ್.ಡಿ.ಕೋಟೆಯಲ್ಲಿ ಕಳೆಗಟ್ಟಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…

19 mins ago

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

20 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

20 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

21 hours ago