ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ ಒಪ್ಪಿಕೊಳ್ಳಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಘಟನೆಗೆ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಖಂಡನಾ ಪ್ರತಿಕ್ರಿಯೆಗಳು ವ್ಯಕ್ತವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನು ಓದಿ : ಓದುಗರ ಪತ್ರ: ಸಿಜೆಐ ಮೇಲೆ ಶೂ ಎಸೆತ ಹೇಯ ಕೃತ್ಯ
ನಾನು ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಯಸುವುದಿಲ್ಲ. ಆದರೆ, ಅತ್ಯಂತ ನೋವಿನಿಂದ ಹೇಳುತ್ತಿದ್ದೇನೆ. ಇಂತಹ ವಿಚಾರಧಾರೆಗಳನ್ನು ಹಾಗೂ ಸಮಾಜದಲ್ಲಿನ ಮಾನಸಿಕ ಸ್ಥಿತಿಗಳನ್ನು ಬೆಳೆಸುತ್ತಿರುವ ಸಂಘಟನೆಗಳನ್ನು ಖಂಡಿಸಬೇಕಿದೆ ಮತ್ತು ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಈವರೆಗೂ ಇಂತಹ ಅವಮಾನ ಆಗಿರಲಿಲ್ಲ. ಧರ್ಮದ ಹೆಸರಿನಲ್ಲಿ ಹಾಗೂ ವಿಶೇಷ ವಿಚಾರಧಾರೆಯ ವ್ಯಕ್ತಿ ಮಾಡಿರುವ ಕೃತ್ಯ ಖಂಡನೀಯ. ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಆಕ್ಷೇಪವನ್ನು ತಿಳಿಸಿದೆ. ತಾವು ಕೂಡ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದರು.
ಈ ಘಟನೆಗೆ ಪ್ರಗತಿಪರ ಆಲೋಚನೆಯಿರುವ ವ್ಯಕ್ತಿಗಳು, ವಕೀಲರು, ಸರ್ಕಾರಗಳಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ರಾಜಕೀಯ ಪಕ್ಷಗಳು, ಸರ್ಕಾರಗಳು, ವಕೀಲರು ಹಾಗೂ ಸಮಾಜ ಪ್ರತಿಕ್ರಿಯಿಸಿಲ್ಲ. ಯಾರೂ ಕೂಡ ಇಂತಹದನ್ನು ಸಹಿಸಬಾರದು ಎಂದು ಹೇಳಿದರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…