Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಶಾಲೆಗಳಲ್ಲಿ ಶಿಕ್ಷಕರ ಕೊರತೆ: ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮತ್ತೆ 10 ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದ ಪ್ರಸ್ತಾಪ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ತಕ್ಷಣಕ್ಕೆ ಸರ್ಕಾರಿ ಶಾಲೆಗಳಲ್ಲಿ ಸಮಸ್ಯೆ ಬಗೆಹರಿಸುವ ಸಲುವಾಗಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಇನ್ನು ಪ್ರಸಕ್ತ ಸಾಲಿನಲ್ಲಿ ಎರಡು ಸಾವಿರ ಇಂಗ್ಲೀಷ್‌ ಶಾಲೆಗಳನ್ನು ತೆರೆಯಲಾಗಿದ್ದು, 1008 ಅಂಗನವಾಡಿಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಶಾಲೆ-ನಮ್ಮ ಜವಾಬ್ದಾರಿ ವ್ಯವಸ್ಥೆ ಚಾಲನೆಗೆ ಬರಲಿದೆ ಎಂದು ಮಾಹಿತಿ ನೀಡಿದರು.

Tags:
error: Content is protected !!