ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮತ್ತೆ 10 ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದ ಪ್ರಸ್ತಾಪ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ತಕ್ಷಣಕ್ಕೆ ಸರ್ಕಾರಿ ಶಾಲೆಗಳಲ್ಲಿ ಸಮಸ್ಯೆ ಬಗೆಹರಿಸುವ ಸಲುವಾಗಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಇನ್ನು ಪ್ರಸಕ್ತ ಸಾಲಿನಲ್ಲಿ ಎರಡು ಸಾವಿರ ಇಂಗ್ಲೀಷ್ ಶಾಲೆಗಳನ್ನು ತೆರೆಯಲಾಗಿದ್ದು, 1008 ಅಂಗನವಾಡಿಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಶಾಲೆ-ನಮ್ಮ ಜವಾಬ್ದಾರಿ ವ್ಯವಸ್ಥೆ ಚಾಲನೆಗೆ ಬರಲಿದೆ ಎಂದು ಮಾಹಿತಿ ನೀಡಿದರು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…