ರಾಜ್ಯ

ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಬಳಸಿಕೊಂಡಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಯಾವ ಯಾವ ಸರ್ಕಾರ ಇದ್ದಾಗ ಏನೇನು ತೀರ್ಮಾನ ಆಗಿದೆ ಎಂಬ ಬಗ್ಗೆ ಇಂದು ಚರ್ಚೆ ನಡೆಸಿದ್ದೇವೆ. ರಾಜ್ಯಪಾಲರು ಇಷ್ಟು ಬೇಗ ನೋಟಿಸ್‌ ಕೊಟ್ಟಿದ್ದಾರೆ ಎಂದರೇ ಏನು ಅರ್ಥ ಎಂದು ಪ್ರಶ್ನಿಸಿದರು.

ರಾಜ್ಯಪಾಲರು ಸಿಎಂಗೆ ಶೋಕಾಸ್‌ ನೋಟಿಸ್‌ ಕೊಟ್ಟಿರುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿದ್ದೇವೆ. ರಾಜ್ಯಪಾಲರಿಗೆ ಸಲಹೆ ನೀಡಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಿಎಂಗೆ ರಾಜ್ಯಪಾಲರು ತಮ್ಮ ನೋಟಿಸ್‌ ವಾಪಸ್‌ ಪಡೆಯಬೇಕು ಎಂದು ನಿರ್ಣಯವಾಗಿದೆ ಎಂದು ಇಂದಿನ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಹರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

27 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

4 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

4 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

4 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

4 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

4 hours ago