ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಮಾರ್ಚ್.31) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರಿಗೆ ನನ್ನದು ಪರೋಕ್ಷ ಬೆಂಬಲ ಇದೆಯೆಂದು ಅಲ್ಲ. ಅವರ ಬಗ್ಗೆ ನಮ್ಮ ಹೈಕಮಾಂಡ್ ನಿರ್ಧಾರಿಸಿ ಉಚ್ಚಾಟನೆ ಮಾಡಿದೆ. ಹೀಗಾಗಿ ನಾವು ಹೈಕಮಾಂಡ್ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತದೆ. ಹೀಗಾಗಿ ಯತ್ನಾಳ್ ಪಕ್ಷದಿಂದ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಈ ಹಿಂದೆ ಉಮಾಭಾರತಿ ಎಂಬುವವರು ಸಹ ಪಕ್ಷದಿಂದ ಉಚ್ಛಾಟನೆಗೊಂಡು ಆರು ವರ್ಷಗಳ ನಂತರ ಪಕ್ಷಕ್ಕೆ ಮರಳಿದರು. ಆದರೆ ಮತ್ತೊಮ್ಮೆ ಪಕ್ಷಕ್ಕೆ ಸೇರುವಾಗ ಅವರು ಸುಸ್ತಾಗಿ ಹೋಗಿದ್ದರು. ಅವರಂತೆಯೇ ಯತ್ನಾಳ್ ಅವರಿಗೂ ಆಗಬಾರದು ಎಂಬ ಭಾವನೆ ಇದೆ ಅಷ್ಟೇ ಎಂದರು.
ದೇಶ ಮತ್ತು ಪಕ್ಷದ ಪರವಾಗಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…