ರಾಜ್ಯ

ಬಿಜೆಪಿಯಿಂದ ಯತ್ನಾಳ್‌ ಉಚ್ಛಾಟನೆ| ಹೈಕಮಾಂಡ್‌ನ ತೀರ್ಮಾನ ಸರಿ/ತಪ್ಪೆಂದು ಚರ್ಚೆ ಮಾಡುವುದಿಲ್ಲ: ಶ್ರೀರಾಮುಲು

ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್‌. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್‌ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.31) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್‌ ಅವರಿಗೆ ನನ್ನದು ಪರೋಕ್ಷ ಬೆಂಬಲ ಇದೆಯೆಂದು ಅಲ್ಲ. ಅವರ ಬಗ್ಗೆ ನಮ್ಮ ಹೈಕಮಾಂಡ್‌ ನಿರ್ಧಾರಿಸಿ ಉಚ್ಚಾಟನೆ ಮಾಡಿದೆ. ಹೀಗಾಗಿ ನಾವು ಹೈಕಮಾಂಡ್‌ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತದೆ. ಹೀಗಾಗಿ ಯತ್ನಾಳ್‌ ಪಕ್ಷದಿಂದ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಈ ಹಿಂದೆ ಉಮಾಭಾರತಿ ಎಂಬುವವರು ಸಹ ಪಕ್ಷದಿಂದ ಉಚ್ಛಾಟನೆಗೊಂಡು ಆರು ವರ್ಷಗಳ ನಂತರ ಪಕ್ಷಕ್ಕೆ ಮರಳಿದರು. ಆದರೆ ಮತ್ತೊಮ್ಮೆ ಪಕ್ಷಕ್ಕೆ ಸೇರುವಾಗ ಅವರು ಸುಸ್ತಾಗಿ ಹೋಗಿದ್ದರು. ಅವರಂತೆಯೇ ಯತ್ನಾಳ್‌ ಅವರಿಗೂ ಆಗಬಾರದು ಎಂಬ ಭಾವನೆ ಇದೆ ಅಷ್ಟೇ ಎಂದರು.

ದೇಶ ಮತ್ತು ಪಕ್ಷದ ಪರವಾಗಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

39 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

45 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

50 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

55 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

59 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago