ಬೆಂಗಳೂರು: ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತೀವ್ರ ಆಘಾತ ಉಂಟು ಮಾಡಿದೆ. ತುಮಕೂರಿನಿಂದ ರಾಜಣ್ಣ ಹಾಗೂ ಪರಮೇಶ್ವರ್ ಇಬ್ಬರು ಸಂಪುಟದಲ್ಲಿದ್ದರು. ಇಬ್ಬರೂ ಒಳ್ಳೆಯ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದ ಹಾಗೆ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದನ್ನು ಕೇಳಿ ಬೇಸರವಾಗಿದೆ ಎಂದರು.
ರಾಜಣ್ಣ ನೇರ ಸ್ವಭಾವದವರು. ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ರಾಜಣ್ಣ ಮತ್ತೆ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.





