ರಾಜ್ಯ

ತೆರಿಗೆ ಸಂಗ್ರಹದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳು ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣ ಬಹುದು. ಕದಂಬರು ಕರ್ನಾಟಕದಲ್ಲಿ ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ. ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ. ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ ಎಸ್. ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ . ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ. ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.

ತೆರಿಗೆ ಸೋರಿಹೋಗದಂತೆ ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡುತ್ತದೆ. 2022-23 ನೇ ಸಾಲಿನಲ್ಲಿ 1.22,821 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಾಣಿಜ್ಯ ತೆರಿಗೆ ಇಲಾಖೆಯ 65 ಜನರಿಗೆ ಪ್ರಶಸ್ತಿಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ. ಕೆ. ಗೋವಿಂದರಾಜು ಹಾಗೂ ನಜೀರ್ ಅಹ್ಮದ್, ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮತ್ತಿತರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago