ರಾಜ್ಯ

ಎಐಸಿಸಿಗೆ ನಿಗಮ ಮಂಡಳಿ ಪಟ್ಟಿ ಸಲ್ಲಿಸಿದ ಸಿದ್ದರಾಮಯ್ಯ, ಡಿಕೆಶಿ

ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದೆ. ಸದ್ಯ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ 4 ತಾಸಿನ ಸುದೀರ್ಘ ಚರ್ಚೆಯ ಬಳಿಕ ನಿಗಮ ಮಂಡಳಿಯ ಅಂತಿಮ ಪಟ್ಟಿಯನ್ನು ತಯಾರಿಸಿದ್ದು, ತಮ್ಮ ನಡುವೆ ಇದ್ದ ಗೊಂದಲವನ್ನು ಬಗೆಹರಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಿಗಮ ಮಂಡಳಿ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಲ್ಲಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ “ಲಿಸ್ಟ್‌ ಕೊಟ್ಟಿದ್ದೇವೆ ಈಗ. ಅವರು ಲಿಸ್ಟ್‌ ನೋಡಿಕೊಂಡು ಹೇಳ್ತಾರೆ. ಇನ್ನೊಂದೆರಡು ದಿನಗಳಲ್ಲಿ ನೋಡಿ ಹೇಳುತ್ತೇವೆ ಎಂದಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

“ನಾನು ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಮೂರ್ನಾಲ್ಕು ಸಭೆಗಳನ್ನು ಮಾಡಿ ನಮ್ಮ ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ. ಅದಾದ ಬಳಿಕ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರ ಜತೆ ಕುಳಿತುಕೊಂಡು ಮಾತನಾಡಿ ಸಲ್ಲಿಸಿದ್ದೇವೆ. ಎಐಸಿಸಿ ಅಧ್ಯಕ್ಷರಿಗೂ ತಲುಪಿಸಿ ಮಾತನಾಡಿ ಅಂತ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷರ ಗಮನಕ್ಕೂ ತಂದಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಹೇಳಿದರು. ಕಾರ್ಯಕರ್ತರಿಗೂ ಸಹ ಅವಕಾಶ ಕೊಡಿ ಅಂತ ಹೇಳಿದ್ದಾರಂತೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ “ಮೊದಲಿನಿಂದನೂ ನಾವೇನು ಕಾರ್ಯಕರ್ತರಿಗೆ ಕೊಡಬೇಕು ಅಂತ ಏನಿಲ್ಲ. ಅವರಿಗೂ ಕೊಡಬೇಕಾಗುತ್ತದೆ, ಅದೂ ಗಮನದಲ್ಲಿದೆ. ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ, ಅವರು ತಿಳಿಸುತ್ತಾರೆ” ಎಂದು ಉತ್ತರಿಸಿದರು.

andolana

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

6 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

6 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

7 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

7 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

7 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

7 hours ago