ರಾಜ್ಯ

ಕರ್ನಾಟಕದ ೫ ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ಸಿದ್ದರಾಮಯ್ಯ ಆಗ್ರಹ

ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕದ ೫ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಆಗ್ರಹಿಸಿದ್ದಾರೆ.

ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟ ಹಲವು ಮನವಿಗಳನ್ನು ಸಲ್ಲಿಸಿದರು.  ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ ೨೦೦ ಕೋಟಿ ರೂ. ಗಳಂತೆ ಒಟ್ಟು ೧೦೦೦ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕೆಂದು ಆಗ್ರಹಿಸಿದರು.

ಅಲ್ಲದೆ  ೧೭೫ ಕೋಟಿ ರೂ. ವೆಚ್ಚದಲ್ಲಿ ೫೮,೫೪೬ ಬಾಡಿ ವೋರ್ನ್ ಕ್ಯಾಮರಾ ಖರೀದಿಸುವ ಅಗತ್ಯವಿದ್ದು, ೧೦೦ ಕೋಟಿ ರೂ. ನೆರವು ನೀಡುವಂತೆ ಹಾಗೂ ೧೦೦ ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ ೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ೩೦೦ ಕೋಟಿ ರೂ ನೆರವು ಸೇರಿ ಮತ್ತಿತರ ವಿಷಯಗಳ ಕುರಿತು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇತರರು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

2 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

2 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

2 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

2 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

3 hours ago