ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕದ ೫ ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ಆಗ್ರಹಿಸಿದ್ದಾರೆ.
ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟ ಹಲವು ಮನವಿಗಳನ್ನು ಸಲ್ಲಿಸಿದರು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ ೨೦೦ ಕೋಟಿ ರೂ. ಗಳಂತೆ ಒಟ್ಟು ೧೦೦೦ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕೆಂದು ಆಗ್ರಹಿಸಿದರು.
ಅಲ್ಲದೆ ೧೭೫ ಕೋಟಿ ರೂ. ವೆಚ್ಚದಲ್ಲಿ ೫೮,೫೪೬ ಬಾಡಿ ವೋರ್ನ್ ಕ್ಯಾಮರಾ ಖರೀದಿಸುವ ಅಗತ್ಯವಿದ್ದು, ೧೦೦ ಕೋಟಿ ರೂ. ನೆರವು ನೀಡುವಂತೆ ಹಾಗೂ ೧೦೦ ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ ೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ೩೦೦ ಕೋಟಿ ರೂ ನೆರವು ಸೇರಿ ಮತ್ತಿತರ ವಿಷಯಗಳ ಕುರಿತು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇತರರು ಉಪಸ್ಥಿತರಿದ್ದರು.
ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ…
ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ…
ಮಂಡ್ಯ: ನಂದಿನಿ ಮೊಸರು ಪ್ಯಾಕೆಟ್‌ನಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂಬ ಪ್ರಕರಣಕ್ಕೆ ಪೊಲೀಸ್ ವಿಚಾರಣೆ ವೇಳೆ ತಿರುವು ಸಿಕ್ಕಿದೆ. ಮೊಸರಿನಲ್ಲಿ…
ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಆಯುಕ್ತರಾಗಿ ವಿಷ್ಣುವರ್ಧನ್ ಅವರನ್ನು ನೇಮಕ…
ಸುಧಾ ಆಡುಕಳ ನಾಗರಿಕತೆ ಎಂದರೇನು? ನಾನೀಗ ನಿನಗೆ ಪ್ರಾಚೀನ ನಾಗರಿಕತೆಯ ಬಗ್ಗೆ ಹೇಳುತ್ತೇನೆ. ಅದಕ್ಕಿಂತ ಮೊದಲು ನಾವು ನಾಗರಿಕತೆ ಯೆಂದರೇನು…