Mysore
20
overcast clouds

Social Media

ಬುಧವಾರ, 09 ಅಕ್ಟೋಬರ್ 2024
Light
Dark

ಕೋರ್ಟ್‌ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ ಪ್ರಾಸಿಕ್ಯೂಷನ್‌ ವಿಚಾರವಾಗಿ ಬಿಗ್‌ಶಾಕ್‌ ನೀಡಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕೋರ್ಟ್‌ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶದ ಪ್ರತಿ ಪಡೆದು ಓದಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನ್ಯಾಯಾಲಯಕ್ಕೆ ಸೆಕ್ಷನ್‌ 218ರ ಅಡಿಯಲ್ಲಿ ಅಭಿಯೋಜನೆಯನ್ನು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ. ಇನ್ನುಳಿದ ಸೆಕ್ಷನ್‌ 17ಎ ಅಡಿಯ ಅರ್ಜಿಯನ್ನು ಮಾತ್ರ ಸ್ವೀಕರಿಸಿ ತನಿಖೆಗೆ ಆದೇಶ ನೀಡಿದೆ. ಹೀಗಾಗಿ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದರು.

ಹೈಕೋರ್ಟ್‌ ತನಿಖೆಗೆ ಆದೇಶ ನೀಡಿ ತೀರ್ಪು ನೀಡಿರುವ 17ಎ ಅಡಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ತನಿಖೆಗೆ ಅವಕಾಶ ಇದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ತಜ್ಞರ ಜೊತೆ ಸಮಾಲೋಚನೆ ನಡೆಸಿ ಕಾನೂನು ಹೋರಾಟದ ರೂಪುರೇಷೆಯನ್ನು ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

 

Tags: