ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಬಿರುಗಾಳಿ ಜೋರಾಗಿ ಬೀಸುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯ ರಾಜಕಾರಣವನ್ನು ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳಲಿದ್ದಾರೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಸದ್ಯ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯರನ್ನು ನೇಮಕ ಮಾಡಲಾಗಿದೆ. ಮಂಡಳಿಯ ಚಟುವಟಿಕೆಗಳನ್ನು ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ನಿರ್ಧರಿಸಿದ್ದು, ಇದೇ ಜುಲೈ.15ರಂದು ಬೆಂಗಳೂರಿನಲ್ಲಿ ಮೊದಲ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಈ ಪೈಕಿ ಮಾಜಿ ಸಿಎಂಗಳು, 10 ಮಂದಿ ಕೇಂದ್ರದ ಮಾಜಿ ಸಚಿವರೂ ಸಹ ಪಾಲ್ಗೊಳ್ಳುವ ಸಾಧ್ಯತೆಯಿದೆ.