b y vijayendra
ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಗಿಲು ಬಡಾವಣೆಯಲ್ಲಿ ಕೇರಳ ವಲಸಿಗರು ಅಕ್ರಮವಾಗಿ ನೆಲೆಸಿದ್ದರು. ಆ ಮನೆಗಳನ್ನು ಸರ್ಕಾರ ನೆಲಸಮ ಮಾಡಿತು. ನಂತರ ಕೆಸಿ ವೇಣುಗೋಪಾಲ್ ಬೆದರಿಕೆ ಹಾಕುವ ಕೆಲಸ ಮಾಡಿದರು. ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಆ ಮೇಲೆ ಸಿಎಂ ಕುರ್ಚಿ ಪಡೆದುಕೊಳ್ಳಲು ಡಿಕೆಶಿ ಪ್ರಯತ್ನಿಸುತ್ತಿದ್ದಾರೆ. ಈಗ ಸಿಎಂ ಹಾಗೂ ಡಿಸಿಎಂ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಈಗ ಅಕ್ರಮ ವಲಸಿಗರಿಗೆ ಮನೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದೆಲ್ಲಾ ಬರೀ ಕುರ್ಚಿ ಉಳಿಸಿಕೊಳ್ಳಲು ಮಾತ್ರ ಎಂದು ವಾಗ್ದಾಳಿ ನಡೆಸಿದರು.
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…