ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು ಇ.ಡಿ.ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು.
ಶಾಂತಿನಗರದಲ್ಲಿರುವ ಇಡಿ ತನಿಖಾ ಸಂಸ್ಥೆಯ ವಿಚಾರಣೆಯ ಹಾಜರಾದ ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಅವರು, ಕೆಸರೆ ಗ್ರಾಮದದಲ್ಲಿರುವ ಜಮೀನಿನ ವಿಚಾರವಾಗಿ ತನಿಖೆ ಎದುರಿಸುತ್ತಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ ದೂರುದಾರರ ಸ್ನೇಹಮಯಿ ಕೃಷ್ಣ ದೂರಿನ ಆಧಾರದ ಮೇಲೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಪ್ರಕರಣದಲ್ಲಿ ಬಾಗಿಯಾಗಿರುವ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಂತೆಯೇ ಇದೀಗ ಲೋಕಾಯುಕ್ತದ ಎಫ್‌ಐಆರ್‌ನಲ್ಲಿ ಎ3 ಆರೋಪಿ ಎಂದು ದಾಖಲಾಗಿರುವ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.





