ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು ನನ್ನ ಕೈಯಲ್ಲೂ ಇಲ್ಲ ಧರ್ಮಗುರುಗಳ ಕೈಯಲ್ಲೂ ಇಲ್ಲ. 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದ ಮತದಾರರು ಕಾಂಗ್ರೆಸ್‌ಗೆ 135 ಶಾಸಕರನ್ನು ಆಯ್ಕೆ ಮಾಡಿದ್ರು. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳಿಸಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಯಿತು.. ಶಾಸಕಾಂಗ ಪಕ್ಷದ ನಾಯಕರ ಸ್ಪರ್ಧೆಯಲ್ಲಿ ಒಬ್ಬೊಬ್ಬ ಶಾಸಕರು ಯಾರು ಆಯ್ಕೆ ಆಗಬೇಕು ಎಂಬುದನ್ನು ಚೀಟಿಯಲ್ಲಿ ಹೆಸರು ಬರೆದುಕೊಟ್ಟಿದ್ದರು. ಇದನ್ನು ಲೆಕ್ಕ ಹಾಕಿದಾಗ ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಆಯ್ಕೆ ಆಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು.