ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಪಕ್ಷದ ಶಾಸಕರು ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದರು. ಆ ಸಂದರ್ಭದಲ್ಲಿ ಹೈಕಮಾಂಡ್ ನಮಗೆ ಎರಡೂವರೆ ವರ್ಷ ಅಧಿಕಾರ ಎಂದು ಹೇಳಿರಲಿಲ್ಲ. ಹೀಗಾಗಿ ನಾವೆಲ್ಲಾ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ ಎಂದರು.
ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ನಾನು ಈಗ ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ತೀರ್ಮಾನ ಏನೇ ಇದ್ದರೂ ಅದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದರು.
ಇನ್ನು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಮೊದಲು ಸುಗ್ರೀವಾಜ್ಞೆ ಕಳುಹಿಸಿದಾಗ ರಾಜ್ಯಪಾಲರು ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ರಾಜ್ಯಪಾಲರ ಪ್ರಶ್ನೆಗಳಿಗೆಲ್ಲ ಸರ್ಕಾರ ಉತ್ತರ ಕಳುಹಿಸಿತ್ತು. ಅದನ್ನೆಲ್ಲಾ ಪರಿಶೀಲಿಸಿ ರಾಜ್ಯಪಾಲರು ಒಪ್ಪಿಗೆ ಕೊಟ್ಟಿದ್ದಾರೆ. ತಕ್ಷಣವೇ ಅದು ಜಾರಿಗೆ ಬಂದಿದೆ ಎಂದರು.
ಇನ್ನು ಮೈಸೂರಿನ ಉದಯಗಿರಿ ಠಾಣೆ ಮುಂದೆ ಗಲಾಟೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಮಾತೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪೊಲೀಸರು ಆರೋಪಿಗಳ ಹುಡುಕಾಟದಲ್ಲಿದ್ದಾರೆ ಎಂದರು.
ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ…
ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ…
ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ…
ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ…