ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಪಕ್ಷದ ಶಾಸಕರು ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದರು. ಆ ಸಂದರ್ಭದಲ್ಲಿ ಹೈಕಮಾಂಡ್ ನಮಗೆ ಎರಡೂವರೆ ವರ್ಷ ಅಧಿಕಾರ ಎಂದು ಹೇಳಿರಲಿಲ್ಲ. ಹೀಗಾಗಿ ನಾವೆಲ್ಲಾ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ ಎಂದರು.
ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ನಾನು ಈಗ ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ತೀರ್ಮಾನ ಏನೇ ಇದ್ದರೂ ಅದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದರು.
ಇನ್ನು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಮೊದಲು ಸುಗ್ರೀವಾಜ್ಞೆ ಕಳುಹಿಸಿದಾಗ ರಾಜ್ಯಪಾಲರು ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ರಾಜ್ಯಪಾಲರ ಪ್ರಶ್ನೆಗಳಿಗೆಲ್ಲ ಸರ್ಕಾರ ಉತ್ತರ ಕಳುಹಿಸಿತ್ತು. ಅದನ್ನೆಲ್ಲಾ ಪರಿಶೀಲಿಸಿ ರಾಜ್ಯಪಾಲರು ಒಪ್ಪಿಗೆ ಕೊಟ್ಟಿದ್ದಾರೆ. ತಕ್ಷಣವೇ ಅದು ಜಾರಿಗೆ ಬಂದಿದೆ ಎಂದರು.
ಇನ್ನು ಮೈಸೂರಿನ ಉದಯಗಿರಿ ಠಾಣೆ ಮುಂದೆ ಗಲಾಟೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಮಾತೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪೊಲೀಸರು ಆರೋಪಿಗಳ ಹುಡುಕಾಟದಲ್ಲಿದ್ದಾರೆ ಎಂದರು.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…