ರಾಜ್ಯ

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಯೂನಿಯನ್‌ ಬ್ಯಾಂಕ್‌ ಅಫ್‌ ಇಂಡಿಯಾದ ಅಧಿಕಾರಿ ಮಹೇಶ್‌ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್‌ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದ್ದ ಸುಮಾರು ರೂ. 46 ಕೋಟಿ ಸ್ಥಗಿತಗೊಳಿಸಲಾಗಿದೆ.

ಪ್ರಕರಣದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ವಿರೊಧ ಪಕ್ಷಗಳ ಸದಸ್ಯರು ನಿಯಮ 69ರ ಅಡಿಯಲ್ಲಿ 7ತಾಸಿಗೂ ಅಧಿಕ ಕಾಲ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೆ ಅಭಿಪ್ರಾಯ ವ್ಯಕ್ತಪಡಿಸಲು ಇರುವ ಅವಕಾಶದಷ್ಟೇ, ಸರ್ಕಾರಕ್ಕೂ ತನ್ನ ನಿಲುವು ವ್ಯಕ್ತಪಡಿಸಲು ಹಕ್ಕಿದೆ ಎಂದು ಹೇಳಿದರು.

ವಾಲ್ಮಿಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣವನ್ನು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಎಂಜಿ ರಸ್ತೆ ಖಾತೆಗೆ ವರ್ಗಾಯಿಸಿ ಅಲ್ಲಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕ್‌ ಆಗಿದ್ದು, ಕೇಂದ್ರ ಹಣಕಾಸು ಇಲಾಖೆ ಅಧೀನಕ್ಕೆ ಬರುತ್ತದೆ. ಬ್ಯಾಂಕ್‌ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಕುರಿತು ಆತ್ಮಹತ್ಯೆ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪರಿಶಿಷ್ಟ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.

ಬಿಜೆಪಿ ಆಡಳಿತ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಹಗರಣವಾದಾಗ ಅವರ ಪಕ್ಷದವರೇ ಆದ ಗೂಳಿಹಟ್ಟಿ ಶೇಖರ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಆಗ ಯಾರು ರಾಜೀನಾಮೆ ನೀಡಿದ್ದರು? ಎಪಿಎಂಸಿ ಯಲ್ಲಿ ಆವರ್ತನಿಧಿ ʻಲೂಟಿ ಮಾಡಿದಾಗ, ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ ಹಗರಣದಲ್ಲಿ 47.10 ಕೋಟಿ ರೂ. ಅವ್ಯವಹಾರವಾದಾಗ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೇ? ಈ ಪ್ರಕರಣಗಳಲ್ಲಿ ಇ.ಡಿ. ಯಾಕೆ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿಲ್ಲ ಎಂದು ಪ್ರಶ್ನಿಸಿದರು.

ಎಲ್ಲಾ ಅಭಿವೃದ್ಧಿ ನಿಗಮಗಳ ಹಣವನ್ನು ಕಡ್ಡಾಯವಾಗಿ ರಾಜ್ಯ ಖಜಾನೆಯಲ್ಲಿ ಜಮಾ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಹಲವು ಮಾರ್ಗಸೂಚಿಗಳನ್ನು ಹಣಕಾಸು ಇಲಾಖೆ ಜಾರಿಗೊಳಿಸಿದೆ ಎಂದು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

11 mins ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

34 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

52 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

2 hours ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

2 hours ago