ರಾಜ್ಯ

ಸಿದ್ದರಾಮಯ್ಯ-ಡಿಕೆಶಿಗೆ ಮೋದಿಯವರನ್ನು ಟೀಕೆ ಮಾಡುವಷ್ಟು ದುರಹಂಕಾರ ಬಂದಿದೆ: ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ತಮ್ಮ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ : ಇನ್ನು, ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅವಧಿ ಮುಂದೂಡಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ”ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ.

ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ” ಎಂದು ಕಿಡಿಕಾರಿದರು.

andolanait

Recent Posts

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

15 mins ago

ಓದುಗರ ಪತ್ರ: ಗಾಳಿ… ತಂಗಾಳಿ !

ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…

20 mins ago

ಓದುಗರ ಪತ್ರ:  ದ್ವೇಷ ಭಾಷಣ ಮಸೂದೆ ದುರ್ಬಳಕೆಯಾಗದಿರಲಿ

ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…

24 mins ago

ಮೈಸೂರು ಮುಡಾ ಹಗರಣ: ಅಕ್ರಮ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ದಿನೇಶ್‌ ಕುಮಾರ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…

26 mins ago

ಓದುಗರ ಪತ್ರ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…

55 mins ago

ಓದುಗರ ಪತ್ರ: ಸೈಬರ್ ವಂಚನೆ ಪ್ರಕರಣ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…

1 hour ago