ಬೆಂಗಳೂರು : ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನು ಯಾವಾಗಲೂ ಇದ್ದೇನೆ ಇರುತ್ತೇನೆ. ಆದರೆ ಸದ್ಯಕ್ಕೆ ಅಂತಹ ಸಂದರ್ಭ ಬಂದಿಲ್ಲ ಎಂದು ಗೃಹ ಸಚಿವ ಡಾಕ್ಟರ್ ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೆವು. ನ್ನನೊಬ್ಬನಿಂದಲೇ ಅದು ಸಾಧ್ಯವಾಯಿತು ಎಂದು ನಾನೆಲ್ಲೂ ಹೇಳಿಕೊಂಡಿಲ್ಲ. ಎಲ್ಲರೂ ಸೇರಿ ಪಕ್ಷದಲ್ಲಿ ಕೆಲಸ ಮಾಡಿದ್ದೆವು, ಜನ ಮತ ಹಾಕಿದ್ದರಿಂದ ಕಾಂಗ್ರೆಸ್ ಗೆದ್ದಿತ್ತು ಎಂದರು.
ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಸೋತಿದ್ದೆ. ಒಂದು ವೇಳೆ ಗೆದ್ದಿದ್ದರೆ ಏನಾಗುತ್ತಿತ್ತು ಎಂದು ಗೊತ್ತಿಲ್ಲ. ಸಾಮಾನ್ಯವಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವವರಿಗೆ ಅವಕಾಶ ನೀಡುವುದು ನಮಲ್ಲಿನ ಸಂಪ್ರದಾಯ. ಕೆಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ. ಸದ್ಯಕ್ಕಂತು ತಮಗೆ ಮುಖ್ಯಮಂತ್ರಿ ಹುದ್ದೆಯ ಕನಸು ಬಿದ್ದಿಲ್ಲ ಎಂದು ಹೇಳಿದರು.
ಇದನ್ನು ಓದಿ: ಡಿಸಿಎಂ ಡಿಕೆಶಿ ಯಾವ ಸಂದರ್ಭದಲ್ಲಾದರೂ ಸಿಎಂ ಆಗಬಹುದು: ಶಾಸಕ ರವಿ ಗಣಿಗ
ರಾಹುಲ್ ಗಾಂಧಿ ಭೇಟಿಯ ಬಳಿಕ ಗೊಂದಲಕ್ಕೆ ಪರಿಹಾರ:
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶಿ ಪ್ರವಾಸದಲ್ಲಿದ್ದಾರೆ. ಅವರು ಭಾರತಕ್ಕೆ ಮರಳಿದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಗೊಂದಲಗಳಿದ್ದರೆ ಪರಿಹಾರ ಹುಡುಕುತ್ತಾರೆ.ಎಐಸಿಸಿ ಅಧ್ಯಕ್ಷರನ್ನು ಸದ್ಯದ ಪರಿಸ್ಥಿತಿಯಲ್ಲಿ ತಾವು ಭೇಟಿಯಾಗುವುದಿಲ್ಲ. ಚಿಕ್ಕ ವಯಸ್ಸಿನಿಂದಲೂ ನಾನು ಖರ್ಗೆ ಅವರನ್ನು ನೋಡಿಕೊಂಡು ಬಂದಿದ್ದೇನೆ. ಸಂದರ್ಭ ಬಂದರೆ ಯಾವಾಗ ಬೇಕಾದರೂ ಹೋಗಿ ಭೇಟಿ ಮಾಡುವಷ್ಟು ಸಲಿಗೆ ತಮಗಿದೆ ಎಂದರು.
ಪ್ರಸ್ತುತ ಸಂದರ್ಭದಲ್ಲಿ ನೇರವಾಗಿ ಎಐಸಿಸಿ ಭೇಟಿ ಮಾಡಿ ಸ್ಪಷ್ಟನೆ ಪಡೆದುಕೊಳ್ಳಬಹುದು. ಖರ್ಗೆ ಅವರಿಗೆ 50 ವರ್ಷಗಳ ಸುದೀರ್ಘ ಅನುಭವ ಇದೆ. ಕರ್ನಾಟಕದ ರಾಜಕೀಯ ಪರಿಸ್ಥಿತಿ ಅವರಿಗೆ ತಿಳಿದಷ್ಟು ಬೇರೆ ಯಾರಿಗೂ ಗೊತ್ತಿರಲಿಕ್ಕಿಲ್ಲ.ಮುಖ್ಯಮಂತ್ರಿ ಹುದ್ದೆಗೆ ತಮ ಹೆಸರು ಹೇಳಿ ಬರುತ್ತಿರುವ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯಿಸುವುದಿಲ್ಲ. ಸದ್ಯಕ್ಕೆ ಅಂತಹ ಸಂದರ್ಭ ಇಲ್ಲ ದಲಿತ ಮುಖ್ಯಮಂತ್ರಿಯ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಸೂಕ್ತ ಸಮಯದಲ್ಲಿ ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡಿದರೆ ಗೊಂದಲಗಳಾಗುವುದು ಸಹಜ. ದಲಿತ ಸಮುದಾಯದ ಸಚಿವರು ಸಭೆ ನಡೆಸಿದ ಬಳಿಕ ನಡೆಸಿದ ತಕ್ಷಣ ದಲಿತ ಮುಖ್ಯಮಂತ್ರಿ ಆಗುವುದಿಲ್ಲ ಎಂದು ವಿವರಿಸಿದರು. ಕಾಂಗ್ರೆಸ್ ನಲ್ಲಿ ಯಾವುದೇ ಸಮಸ್ಯೆಗಳಿಲ್ಲ ಕೆಲವು ಶಾಸಕರು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿರಬಹುದು. ನಾವೆಲ್ಲಾ ಒಂದಷ್ಟು ಮಂದಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ರಾಜಕೀಯವನ್ನು ಚರ್ಚೆ ಮಾಡಿದ್ದೇವೆ ಸಂಪುಟದಲ್ಲಿರುವುದರಿಂದ ಅಭಿವೃದ್ಧಿ ವಿಚಾರಗಳ ಬಗ್ಗೆ ಹಣಕಾಸು, ಅನುದಾನಕ್ಕೆ ಸಂಬಂಧ ಪಟ್ಟಂತೆ ವಿಚಾರಗಳ ಚರ್ಚೆ ಮಾಡಿದ್ದೇವೆ. ಇಲಾಖೆಯ ಅಭಿವೃದ್ಧಿಗಳ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಂಡಿರುತ್ತೇವೆ ಎಂದು ಹೇಳಿದರು.
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…