ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಉಚಿತ ವಿದ್ಯುತ್ ಸೌಲಭ್ಯ ಕೂಡಾ ಒಂದು. ಇದರಡಿ ಅನೇಕ ಕುಟುಂಬಗಳು ಇಂದು ಉಚಿತ ವಿದ್ಯುತ್ ಸೌಲಭ್ಯ ಅನುಭವಿಸುತ್ತಿದೆ.
ಆದರೆ ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ಫಲಾನುಭವಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಇನ್ಮುಂದೆ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದವರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರತಿ ಮನೆಗೂ 200 ಯೂನಿಟ್ ಫ್ರೀ ವಿದ್ಯುತ್ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಸರ್ಕಾರ ಬಳಿಕ ಷರತ್ತುಗಳನ್ನು ವಿಧಿಸಿತ್ತು. ಇದೀಗ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದೆ.
ಹೀಗಾಗಿ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಬಳಸಿದ ಅಷ್ಟೂ ಯೂನಿಟ್ ಗಳಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಫುಲ್ ಬಿಲ್ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಹೆಚ್ಚು. ಆದರೆ ಬೇಡಿಕೆಗೆ ತಕ್ಕಷ್ಟು ಉತ್ಪಾದನೆ ಸಾಧ್ಯವಾಗದೇ ಇರುವುದರಿಂದ ಇಂತಹ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…