ರಾಜ್ಯ

ನಾನು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್‌ ಆದ ದರ್ಶನ್‌ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ. ಅಧಿಕಾರಿಗಳಿಂದ ಲೋಪದೋಷಗಳಾಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜೈಲಿನೊಳಗೆ ದರ್ಶನ್‌ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟಂತೆ ಈವರೆಗೆ ಏಳು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೇ ಅವರನ್ನು ಅಮಾನತು ಮಾಡಲಾಗುವುದು ಎಂದು ಖಡಕ್‌ ಉತ್ತರ ನೀಡಿದರು.

ಗೃಹಮಂತ್ರಿಗಳಿಗೆ ಇಂದು ಜೈಲಿಗೆ ಭೇಟಿ ನೀಡಿ ಇದಕ್ಕೆಲ್ಲಾ ಅವಕಾಶ ಮಾಡಿಕೊಟ್ಟಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಇನ್ನು ದರ್ಶನ್‌ ಸೇರಿ ಅವರ ಜೊತೆಗಿದ್ದ ಹಲವು ಆರೋಪಿಗಳನ್ನು ಸಹಾ ಬೇರೆಡೆಗೆ ಶಿಫ್ಟ್‌ ಮಾಡುವ ಬಗ್ಗೆ ಆಲೋಚನೆಯಿದೆ. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಕೆಲಸವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಂದಿನ ಸಾಹಿತ್ಯ ಸಮ್ಮೇಳನದ ಆತಿಥ್ಯ ಪಡೆದ ಬಳ್ಳಾರಿ

ಮಂಡ್ಯ: 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 66ವರ್ಷದ ಬಳಿಕ ಗಣಿನಾಡಿಗೆ ನುಡಿತೇರು…

12 mins ago

ಪಂಚಮಸಾಲಿ ಹೋರಾಟದಲ್ಲಿ ಲಾಠಿ ಬೀಸಿದ ಪೊಲೀಸರಿಗೆ ಬಹುಮಾನ; ಜೆಡಿಎಸ್‌ ಆರೋಪ

ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್‌…

27 mins ago

ಕಲಬುರ್ಗಿ: ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…

30 mins ago

ವಿದೇಶಗಳಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರ: ಅಮರನಾಥ ಗೌಡ

ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…

33 mins ago

ಕಾಂಗ್ರೆಸ್‌ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಚಂದ್ರು ಹೇಳಿಕೆ ಉಲ್ಲೇಖಿಸಿ ಟ್ವೀಟ್‌ ಮಾಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…

1 hour ago

ಕೃಷಿ ಜತೆಗೆ ಬೃಹತ್ ಕೈಗಾರಿಕಾ ಬೆಳವಣಿಗೆ ಅಗತ್ಯ; ಜಯಕುಮಾರ್

ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…

1 hour ago